ಬೈಕ್ ರೈಡ್ ಮಾಡಿ ಸಂವಿಧಾನ ಜಾಗೃತಿ ರ್ಯಾಲಿಗೆ ಚಾಲನೆ ನೀಡಿದ ಡಿಸಿ ರಘುನಂದನ್ ಮೂರ್ತಿ

23 HVR 2
Published on

ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ರಥ ಇಂದು ದೇವಗಿರಿ ಗ್ರಾಮಕ್ಕೆ ಆಗಮಿಸಿತು. ಈ ಜಾಥಾ ಸ್ವಾಗತಿಸುವ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆಯೋಜಿಸಿದ್ದ ಬೈಕ್ ರ‌್ಯಾಲಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಬೈಕ್ ಚಲಾಯಿಸುವ ಮೂಲಕ ಚಾಲನೆ ನೀಡಿದರು.
ದೇವಗಿರಿಯಲ್ಲಿ ರಥವನ್ನು ಸ್ವಾಗತಿಸಿದ ಜಿಲ್ಲಾಧಿಕಾರಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಉಪ ವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರವೀಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಸಂಚಾರ
ಜ.26ರಂದು ಆರಂಭವಾಗಿದ್ದ ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯ 223 ಗ್ರಾಮ ಪಂಚಾಯಿತಿ ಹಾಗೂ 10 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡು ಮಾರ್ಗಗಳಲ್ಲಿ ಸಂಚರಿಸಿದೆ. ಜಾಥಾ ಫೆ.23ರಂದು ಬೆಳಗ್ಗೆ 10.30ಕ್ಕೆ ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರೋಪಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net