ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಮೈಗೂಡಿಸಿಕೊಳ್ಳಿ

18 HVR 4
Published on

ಹಾವೇರಿ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಅಪ್ರತಿಮವಾಗಿ ಹೋರಾಡಿದ ನಿಸ್ವಾರ್ಥ ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಸ್ಫೂರ್ತಿಯನ್ನು ಯುವಜನತೆ ಅಳವಡಿಸಿಕೊಳ್ಳಬೇಕಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿ ಅಧ್ಯಕ್ಷ ಅಶೋಕ ಹೊಸಮನಿ ಅಭಿಪ್ರಾಯಪಟ್ಟರು.

ನಗರದ ಶ್ರೀ ಬೀರೇಶ್ವರ ಸಮುದಾಯ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಿತ್ತೂರು ಚನ್ನಮ್ಮಳ ಬಲಗೈ ಬಂಟನಾಗಿದ್ದ ರಾಯಣ್ಣ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ವಿರೋಚಿತವಾಗಿ ಹೋರಾಡಿದರು. ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಯುವಜನರಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಇದ್ದರೆ ರಾಯಣ್ಣನಂತಹ ದೇಶಪ್ರೇಮಿಗಳಿರಬೇಕು ಎಂದರು.

ಲಕ್ಷ್ಮೀಪ್ರಭ ಹುಲ್ಲೂರ, ಶಾಂತಾಬಾಯಿ ಶಿರೂರ, ನಿವೃತ್ತ ಶಿಕ್ಷಕ ಎಸ್.ಆರ್.ಗುಂಜಾಳ ಮಾತನಾಡಿದರು.

ಚಿನ್ನಮ್ಮ ಡೊಳ್ಳಿನ, ಪೂಜಾ ಎರೇಸೀಮೆ, ರೇಣುಕಾ ಅಗಡಿ, ರತ್ನಾ ಸಿಡಗನಾಳ, ಪವಿತ್ರ ಮತ್ತಿಹಳ್ಳಿ, ರತ್ನಾ ಡೊಳ್ಳಿನ, ಯಶೋಧಾ ಬದಾಮಿ, ರೇಖಾ ಜಂಗಳಿ, ಕರಿಯಪ್ಪ ಮೆಡ್ಲೇರಿ, ಚಂದ್ರಕಲಾ ಬೆನಕನವಾರಿ, ಸಂತೋಷ ಬೆನಕನವಾರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net