ಸತೀಶ ಕುಲಕರ್ಣಿ ಅಭಿನಂದನಾ ಸಮಾರಂಭ 13ರಂದು

Satish Kulakarni 2
Published on

ಹಾವೇರಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರ 75ನೇ ಜನ್ಮದಿನದ ನಿಮಿತ್ತ ನಗರದ ಕೆ.ಇ.ಬಿ. ಸಮುದಾಯ ಭವನದಲ್ಲಿ ಜು.13ರಂದು ಬೆಳಗ್ಗೆ 10.30ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಸಮಾರಂಭ ಉದ್ಘಾಟಿಸುವರು. ಸಾಹಿತಿ ಡಾ.ಧರಣಿದೇವಿ ಮಾಲಗತ್ತಿ ‘ಕಟ್ಟುವ ಕವಿ’ ಅಭಿನಂದನ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ, ಸಾಹಿತಿ ಡಾ.ಸರಜೂ ಕಾಟ್ಕರ್, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ವಿಜಯಕುಮಾರ ಮುದಕಣ್ಣವರ, ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net