ಹಿರೇಮೆಳ್ಳಳ್ಳಿ ಚೆಕ್‌ಡ್ಯಾಮ್ ನೀರು ಸೋರಿಕೆ; ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷೃಕ್ಕೆ ರೈತರ ಆಕ್ರೋಶ

30 HVR 5
Published on

ಹಾವೇರಿ: ಸವಣೂರ ತಾಲೂಕಿನ ಹಿರೇಮೆಳ್ಳಳ್ಳಿ- ಚಿಕ್ಕಮೆಳ್ಳಳ್ಳಿ ನಡುವಿನ ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಚೆಕ್‌ಡ್ಯಾಮ್ ಗೇಟ್ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಇದು ಸ್ಥಳೀಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸರಿಯಾಗಿ ಗೇಟ್ ಅಳವಡಿಸದ ಕಾರಣ ಗೇಟ್ ಕಿತ್ತು ಹೋಗಿದೆ. ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ರೈತರು ಹಲವು ಬಾರಿ ಕರೆ ಮಾಡಿ ವಿಷಯ ತಿಳಿಸಿದರೂ ಯಾರೂ ಸ್ಥಳಕ್ಕೆ ಆಗಮಿಸಿಲ್ಲ. ಬೇಸಿಗೆಯ ಮುನ್ನವೇ ಇದ್ದ ನೀರು ಖಾಲಿಯಾದರೆ ಬೇಸಿಗೆಯಲ್ಲಿ ರೈತರು ತೀವ್ರ ಸಂಕಷ್ಟ ಅನುಭವಿಸಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಗೇಟ್ ದುರಸ್ಥಿಪಡಿಸಬೇಕು. ಎಲ್ಲ ಗೇಟ್‌ಗಳನ್ನು ದುರಸ್ಥಿಪಡಿಸಿ ಮುಂದೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net