

ಹಾವೇರಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮಜಾತಿಗಳ ಅಭಿವೃದ್ಧಿ ಅನುಷ್ಠಾನದ ಜಿಲ್ಲಾ ಮಟ್ಟದ ಸಮಿತಿಯ ಸದಸ್ಯರಾಗಿ ಹಂಸಭಾವಿ ಗ್ರಾಮದ ಸಾವಿತ್ರಿ ಮೂ. ರತ್ನಾಕರ ನೇಮಕಗೊಂಡಿದ್ದಾರೆ.
ಅಲೆಮಾರಿ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತಿರುವ ಸಾವಿತ್ರಿ ರತ್ನಾಕರ ಹೋರಾಡುತ್ತಿದ್ದಾರೆ. ಅವರನ್ನು ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಗೆ ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.