ಹಾವೇರಿ: ನಗರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಹಾಗೂ ಸ್ಕೌಟ್ಸ್ ಗೈಡ್ಸ್ ವಿಭಾಗಗಳ ಸಮಾರೋಪ ಸಮಾರಂಭ ಆ.9ರಂದು ಬೆಳಗ್ಗೆ 11 ಗಂಟೆಗೆ ಮುನ್ಸಿಪಲ್ ಕಾಲೇಜು ಆವರಣದಲ್ಲಿ ನಡೆಯಲಿದೆ.
ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದಾರೆ. ಸಂಸದ ಶಿವಕುಮಾರ ಉದಾಸಿ, ಹಾವೇರಿ ವಿವಿ ಕುಲಪತಿ ಡಾ.ಸುರೇಶ ಜಂಗಮಶೆಟ್ಟಿ, ಹಾವೇರಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಇತರರು ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ.ರಮೇಶ ತೆವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.