

ಹಾವೇರಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಚಕ್ಕಡಿ ಏರಿ ಬಂದ ಮಕ್ಕಳು
ತಾಲೂಕಿನ ಕೋಳೂರ ಗ್ರಾಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ, ವಿಜ್ಞಾನಿಗಳ ಭಾವಚಿತ್ರ, ವಿವಿಧ ಚಿತ್ರಕಲೆಗಳು ಹಾಗೂ ಅಲಂಕಾರಿಕ ಸಾಮಗ್ರಿಗಳಿಂದ ಬಿಡಿಸಿದ್ದ ಚಿತ್ರಗಳನ್ನು ಚಕ್ಕಡಿಗೆ ಅಂಟಿಸಿ ಶೃಂಗರಿಸಲಾಗಿತ್ತು. ಶಾಲಾರಾಂಭದ ಮೊದಲ ದಿನ ಮಕ್ಕಳನ್ನು ಶೃಂಗರಿಸಿದ ಚಕ್ಕಡಿಯಲ್ಲಿ ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಿಸುವ ಮೂಲಕ ಕರೆತರಲಾಯಿತು. ಶಿಕ್ಷಕರೇ ಟೋಪಿಯನ್ನು ಹಾಕಿಕೊಂಡು ಚಕ್ಕಡಿ ಹೊಡೆದುಕೊಂಡು ಬಂದಿದ್ದು ವಿಶೇಷವಾಗಿತ್ತು.
ಕೋಟ್..
ಶಾಲಾ ಪ್ರಾರಂಭೋತ್ಸವ ಹಿನ್ನೆಲೆ ಜಿಲ್ಲಾದ್ಯಂತ ಶುಕ್ರವಾರ ಪ್ರಾರಂಭವಾದ ಶಾಲೆಗಳಿಗೆ ಮಕ್ಕಳು ಲವಲವಿಕೆಯಿಂದ ಆಗಮಿಸಿದರು. ಶಿಕ್ಷಣ ಇಲಾಖೆಯ ಎಲ್ಲಾ ಅಕಾರಿ ಹಾಗೂ ಸಿಬ್ಬಂದಿವರ್ಗದವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದೇರೀತಿ ಮಕ್ಕಳು ಆಸಕ್ತಿಯಿಂದ ಪ್ರತಿದಿನ ಶಾಲೆಗೆ ಬರಲೆಂಬುದು ಇಲಾಖೆಯ ಆಶಯವಾಗಿದೆ.
- ಸುರೇಶ ಹುಗ್ಗಿ, ಡಿಡಿಪಿಐ ಹಾವೇರಿ