ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published on

ಹಾವೇರಿ: ಜಿಲ್ಲೆಯಲ್ಲಿ ಬಿ.ಎಡ್. ಹಾಗೂ ಡಿ.ಎಡ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳು ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸೆ.30ರವರೆಗ ಅವಧಿ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿರಬೇಕು. ಪಾಲಕರ ವಾರ್ಷಿಕ ಆದಾಯ ಆರು ಲಕ್ಷ ರೂ. ಒಳಗಿರಬೇಕು. ಬಿ.ಎಡ್. ಹಾಗೂ ಡಿ.ಎಡ್ ಕೋರ್ಸ್‌ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು.
ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಸೆ.30ರೊಳಗೆ ಅರ್ಜಿ ಸಲ್ಲಿಸಿ, ಹಾರ್ಡ್ ಪ್ರತಿಗಳನ್ನು ಅಧಿಕೃತ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ಮಾಹಿತಿ ಕೇಂದ್ರ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಗೆ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಶೋಕ ಗಡ್ಡಿಗೌಡರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಭವನ, ಶಿವಾಜಿನಗರ 3ನೇ ಕ್ರಾಸ್ ಹಾವೇರಿ. ಅಥವಾ ಹಾನಗಲ್ಲ, ಶಿಗ್ಗಾಂವಿ, ಸವಣೂರ, ಹಿರೇಕೆರೂರ, ಬ್ಯಾಡಗಿ ಮತ್ತು ರಾಣೆಬೆನ್ನೂರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net