ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ ಇಂದಿನಿಂದ

Published on

ಹಾವೇರಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ ಅ.26 ಹಾಗೂ 27ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಅ.26ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ, ಜಿಲ್ಲೆಯ ಶಾಸಕರು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಪಾಲ್ಗೊಳ್ಳಲಿದ್ದಾರೆ.
ಅ.26ರಂದು ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ 14 ವರ್ಷದ ಬಾಲಕ/ಬಾಲಕಿಯರಿಗೆ ಹಾಗೂ ಅ.27ರಂದು ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ 17 ವರ್ಷದ ಬಾಲಕ/ಬಾಲಕಿಯರಿಗೆ ಕ್ರೀಡಾಕೂಟಗಳು ಜರುಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net