ಹಾವೇರಿ: ಜಿಲ್ಲೆಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಆಗತ್ಯವಿರುವ ನಾಲ್ಕು ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ (ಮೆರಿಟ್) ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ವಿಚಾರಕ, ಶಿಕ್ಷಣ ಸಹಾಯಕ, ತಾಂತ್ರಿಕ ಸಹಾಯಕ ಹಾಗೂ ತಂತ್ರಜ್ಞ ವಿಭಾಗದ ತಲಾ ಒಂದು ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ವಿಚಾರಕ ಹುದ್ದೆಗೆ ಬಿಇ/ಎಂಎಸ್ಸಿ/ ಬಿಇ (ಮೆಕ್ಯಾನಿಕಲ್)/ ಇಆ್ಯಂಡ್‌ಸಿ/ ಎಂಎಸ್ಸಿ ಭೌತಶಾಸ್ತ್ರ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು. ಶಿಕ್ಷಣ ಸಹಾಯಕರು ಹುದ್ದೆಗೆ ಬಿಎಸ್ಸಿ ಜತೆಗೆ ಬಿಎಡ್ ಓದಿದವರು, ತಾಂತ್ರಿಕ ಸಹಾಯಕರು ಹುದ್ದೆಗೆ ಮೂರು ವರ್ಷಗಳ ಡಿಪ್ಲೊಮಾ ಇನ್ ಮೆಕ್ಯಾನಿಕಲ್/ ಇಎಲ್‌ಇ ಇಂಜಿನಿಯರಿಂಗ್ ಹಾಗೂ ತಂತ್ರಜ್ಞ ಹುದ್ದೆಗೆ ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆ ಉಳ್ಳವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಅರ್ಜಿ ನಮೂನೆಯನ್ನು ಹಾವೇರಿ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ ಆ.30ರ ಸಂಜೆ 5 ಗಂಟೆ ಒಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.