

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಹೊಸಮಠದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸಾಧಕ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕ್‌ದೇಸಾಯಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಕೀಲ ಎನ್.ಎನ್.ದಿಳ್ಳೆಪ್ಪನವರ ಹಿರಿಯ ನಾಗರಿಕರ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಜನ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಆಶು ನದಾಫ್, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ.ಅಣ್ಣಿಗೇರಿ, ಇತರರು ಉಪಸ್ಥಿತರಿದ್ದರು.