ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.1ರಂದು

Published on

ಹಾವೇರಿ: ಅ.1ರಂದು ಬೆಳಗ್ಗೆ 10.30ಕ್ಕೆ ನಗರದ ಹೊಸಮಠದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಲಿದೆ.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕ್‌ದೇಸಾಯಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಆಶು ನದಾಫ್, ಎಸ್.ಬಿ.ಅಣ್ಣಿಗೇರಿ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net