ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಿರಿಯರು

16 HVR 6 B
Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇತರ ಸಂಘಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಬಿ.ಅಣ್ಣಿಗೇರಿ ಉದ್ಘಾಟಿಸಿದರು.

ನಗರದ ಚನಬಸಪ್ಪ ಮಾಗಾವಿ(ಗೆಳೆಯರ ಬಳಗ) ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರಥಮ, ದ್ವಿತೀಯ, ತೃತಿಯ ಸ್ಥಾನ ಪಡೆದವರಿಗೆ ಅ.9ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ 200ಕ್ಕೂ ಅಧಿಕ ಹಿರಿಯ ನಾಗರಿಕರು ಭಾಗವಹಿಸಿದ್ದರು. ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಅಧಿಕಾರಿಗಳು ಎಲ್ಲ ತಾಲೂಕಿನ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು, ಇತರರು, ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net