ರಾಜ್ಯ ಪ್ರಶಸ್ತಿಗೆ ಹಿರಿಯ ನಾಗರಿಕರು, ಸಂಸ್ಥೆಗಳಿಂದ ಅರ್ಜಿ ಆಹ್ವಾನ

Published on

ಹಾವೇರಿ: ಶಿಕ್ಷಣ, ಸಾಹಿತ್ಯ, ಕಾನೂನು, ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಸಾಧನೆ ಕುರಿತಾಗಿ ಕನ್ನಡ ಭಾಷೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾನೆಯನ್ನು ದ್ವಿ ಪ್ರತಿಯಲ್ಲಿ ಆಗಸ್ಟ್ 14, 2023ರ ಒಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಜಿಲ್ಲಾ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 04, ನೆಲಮಹಡಿ, ದೇವಗಿರಿ- ಹಾವೇರಿ ಈ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net