ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

Published on

ಹಾವೇರಿ: ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವಳಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‌ಬುಕ್, ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಅರ್ಹ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅಗತ್ಯ ಮಾಹಿತಿ ಒದಗಿಸಿ ಅರ್ಜಿ ಪಡೆಯಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅ.20ರೊಳಗಾಗಿ ಸಲ್ಲಿಸಬೇಕು ಎಂದು ರೇಷ್ಮೆ ಉಪನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net