ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಬ್ರಾಹ್ಮಣ ಸಮಾಜ ಸಹಯೋಗದಲ್ಲಿ ಜಗದ್ಗುರು ಶ್ರೀ ಆದಿಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಮೇ 2ರಂದು ಸಂಜೆ 6 ಗಂಟೆಗೆ ನಗರದ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದೆ. ಇದಕ್ಕೂ ಮೊದಲು ಸಂಜೆ 5 ಗಂಟೆಗೆ ಶಂಕರ ಭಾರತಿ ಮಠದಿಂದ ಆದಿಶಂಕರಾಚಾರ್ಯರ ಭಾವಚಿತ್ರ ಮೆರವಣಿಗೆ ಹೊರಡಲಿದೆ.
ವಿಶೇಷ ಆಹ್ವಾನಿತರಾಗಿ ಹಾವೇರಿ ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ವಸಂತ ಮೊಕ್ತಾಲಿ, ತಾಲೂಕು ಅಧ್ಯಕ್ಷ ಮಹದೇವಗೌಡ ಪಾಟೀಲ ಭಾಗವಹಿಸಲಿದ್ದಾರೆ. ರಾಣೆಬೆನ್ನೂರ ದೇವಿಕಾ ಪಿಯು ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕಿ ಸಂಗೀತಾ ದೇಸಾಯಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.