ಮೊದಲ ದಿನ ಮೂವರಿಂದ ನಾಲ್ಕು ನಾಮಪತ್ರ ಸಲ್ಲಿಕೆ; ಶಿಗ್ಗಾಂವಿ ಉಪಚುನಾವಣೆ ಕದನ ಕಣಕ್ಕೆ ಮೂವರು

18 HVR 5
Published on

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಶುಕ್ರವಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.
ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ್ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ್ ಗುಡಗೇರಿ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವಿ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಸೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ ಉಪಸ್ಥಿತರಿದ್ದರು.
ಅ.25ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ.28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net