ಮತದಾನ ಹಿನ್ನೆಲೆ ನ.13ರಂದು ರಜೆ ಘೋಷಣೆ

Published on

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನದ ದಿನದಂದು ಕ್ಷೇತ್ರದ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ನ.13ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಶಿಗ್ಗಾಂವಿ ಮತ ಕ್ಷೇತ್ರದ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಕೊಂಡಂತೆ) ಸಾರ್ವತ್ರಿಕ ರಜೆ ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕುಗಳು, ಇತರೆ ಬ್ಯಾಂಕುಗಳು ಮುಂತಾದ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕಾರ್ಯನಿರ್ವಹಿಸುವ ನೌಕರರಿಗೆ ಮತದಾನ ಮಾಡಲು ಒಳಪಟ್ಟು ಮತದಾನ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರಾಗಿರುತ್ತಾರೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಅದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ-ಸಂಸ್ಥೆಗಳು ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net