ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ ಜಯಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.