ಮುಡಾ ಹಗರಣ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಟಾಂಗ್; ಕೇಸರಿ ಕುಟುಂಬ ರಾಜಕಾರಣಕ್ಕೆ ಸಿಎಂ ವ್ಯಂಗ್ಯ

5 HVR 2 B
Published on

ಹಾವೇರಿ/ ಶಿಗ್ಗಾಂವಿ: ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ಜೆಡಿಎಸ್‌ನ ಎಚ್.ಡಿ.ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗಲ್ಲ, ಜಗ್ಗಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.

ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ಮಂಗಳವಾರ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 40 ವರ್ಷಗಳಿಂದ ನಾನು ಮಂತ್ರಿ, ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪುಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡುತ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದರು.

ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡುವ ನರೇಂದ್ರ ಮೋದಿ ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಹಾಗೂ ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿಯ ಮೊಮ್ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿಯವರೇ ಎಂದು ಸಿಎಂ ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net