ಶಿಗ್ಗಾಂವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತರ ಸಂಸ್ಥೆಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಮೇ 2ರಂದು ಬೆಳಗ್ಗೆ 10 ಗಂಟೆಗೆ ಶಿಗ್ಗಾಂವಿ ಎಚ್.ಎಸ್.ಎಸ್. ಟೆಕ್ಸ್‌ಟೈಲ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.
ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕದೇಸಾಯಿ ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ, ನ್ಯಾಯಾಧೀಶರಾದ ಅಶ್ವಿನಿ ಚಂದ್ರಕಾಂತ, ತಹಶೀಲ್ದಾರ ರವಿಕುಮಾರ ಕೊರವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್ ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಲಕ್ಕಣ್ಣನವರ, ತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.