ಹಾವೇರಿ: ಶಿಗ್ಗಾಂವಿ ತಹಸೀಲ್ದಾರ್ ಕಚೇರಿಯಲ್ಲಿ ಜ.23ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವೆರೆಗೆ ಹಾವೇರಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಜರುಗಲಿದೆ.
ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ, ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಬ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿಗಳಿಕೆ, ಸರ್ಕಾರಿ ಹಣ ದುರುಪಯೋಗ, ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿ, ನೌಕರರಿಂದ ಲಂಚ ಕೇಳುವ ದೂರುಗಳಿದ್ದರೆ ಲೋಕಾಯುಕ್ತ ನಡೆಸುವ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ದೂರುಗಳನ್ನು ಸಲ್ಲಿಸಬಹುದು.
ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ. ಸಭೆಯ ನಂತರ ವಿವಿಧ ಇಲಾಖೆಯ ಕಚೇರಿಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ, ಪೊಲೀಸ್ ನಿರೀಕ್ಷಕರಾದ ಮುಸ್ತಾಕ್ ಅಹ್ಮದ್, ಮಂಜುನಾಥ ಪಂಡಿತ ಹಾಗೂ ದಾದಾವಲಿ ಕೆ.ಎಚ್. ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.