ಆಗಸ್ಟ್‌ನಲ್ಲಿ ಶಿಗ್ಗಾಂವಿಯಲ್ಲಿ ಮಾದಾರ ಚನ್ನಯ್ಯ ಜಯಂತಿ

RB Timmapur
Published on

ಹಾವೇರಿ: ಶಿಗ್ಗಾಂವಿ ನಗರದಲ್ಲಿ ಆಗಸ್ಟ್‌ನಲ್ಲಿ ಶಿವಶರಣ ಶ್ರೀ ಮಾದಾರ ಚನ್ನಯ್ಯನವರ ಜಯಂತ್ಯತ್ಸವ ಹಮ್ಮಿಕೊಳ್ಳಲಾಗಿದೆ.
ಗದಗ ತೊಂಟದಾರ್ಯ ಜಗದ್ಗುರು ಶ್ರೀ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯನವರ ಗುರುಪೀಠದ ಶ್ರೀ ಬಸವಮೂರ್ತಿ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಚಿವ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಸಚಿವ ಆರ್.ಬಿ.ತಿಮ್ಮಾಪುರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಲಾಗಿದೆ.
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಕೆ.ಎಚ್.ಮುನಿಯಪ್ಪ, ಸಂಸದರಾದ ರಮೇಶ ಜಗಜಣಗಿ, ಗೋವಿಂದ ಕಾರಜೋಳ, ಮಾಜಿ ಸಚಿವ ಎಚ್.ಆಂಜನೇಯ, ಮತ್ತಿತರರು ಪಾಲ್ಗೊಳ್ಳುವರು ಎಂದು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net