

ಬೆಂಗಳೂರು: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.
ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ನಿರಂತರ ವಾಗಿ 4 ಬಾರಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ಬರುವುದರಿಂದ ಅದರ ಅಭಿವೃದ್ಧಿಗೆ ನನ್ನ ಶ್ರಮ ಮುಂದುವರೆಯಲಿದೆ ಎಂದು ಹೇಳಿದರು.