

ಹಾವೇರಿ: ಶಿಗ್ಗಾಂವಿ ಪಟ್ಟಣದಲ್ಲಿ ರೌಡಿಶೀಟರ್ ಸುನೀಲ್ ವಡ್ಡರ ಎಂಬಾತ ಕುಡಿದ ಮತ್ತಿನಲ್ಲಿ ಜಗಳ ತೆಗೆದು, ಯುವಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿದೆ.
ಮಾರುಕಟ್ಟೆ ಪ್ರದೇಶದಲ್ಲಿ ಹಾಡಹಗಲೇ ಶುಕ್ರವಾರ ಯುವಕರಿಬ್ಬರ ಮೇಲೆ ಸುನೀಲ ಹಲ್ಲೆ ನಡೆಸಿದ್ದಾನೆ. ಮನಬಂದಂತೆ ಹೊಡೆದು ಕಾಲಿನಿಂದ ಒದ್ದಿದ್ದಾನೆ. ಬಿಡಿಸಲು ಹೋದವರನ್ನು ತಳ್ಳಾಡಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದು, ಈಗ ವೈರಲ್ ಆಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.