ಕಾರು ಬಿಡಿಸಲು ಲಂಚಕ್ಕೆ ಬೇಡಿಕೆ ಇಟ್ಟ ಕಾನ್‌ಸ್ಟೆಬಲ್; ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಸಿಕ್ಕ ಖಾಕಿ ಅಮಾನತು

Ramesh Bhajantri
Published on

ಹಾವೇರಿ: ಪೊಲೀಸ್ ಠಾಣೆಯಿಂದ ಕಾರು ಬಿಡಿಸಿಕೊಳ್ಳಲು ಪೊಲೀಸ್ ಕಾನ್ಸ್‌ಸ್ಟೆಬಲ್ ಒಬ್ಬರು 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಖಾಕಿ ಲಂಚಕ್ಕೆ ದುಂಬಾಲು ಬಿದ್ದ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿಗ್ಗಾಂವಿ ಪೊಲೀಸ್ ಠಾಣೆಯ ಕಾನ್ಸ್‌ಸ್ಟೆಬಲ್ ರಮೇಶ ಭಜಂತ್ರಿ ಲಂಚ ಕೇಳಿದವರು. ಪೊಲೀಸ್ ಠಾಣೆ ಗೇಟ್ ಎದುರು ಸಾಲು ಸಂತೆ ನಡೆಯುತ್ತಿರುವ ಸಂದರ್ಭದಲ್ಲಿ ಕಾರು ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಸೆರೆಯಾಗಿದೆ. 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಅದರಲ್ಲಿದೆ. ಸುಮಾರು 8.47 ನಿಮಿಷಗಳ ವಿಡಿಯೋ ಇದಾಗಿದೆ.
ಕಾನ್‌ಸ್ಟೆಬಲ್ ರಮೇಶ ಅಮಾನತು
ಕಾನ್‌ಸ್ಟೆಬಲ್ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ದೃಶ್ಯಾವಳಿ ನನ್ನ ಗಮನಕ್ಕೆ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸ್ ಕಾನ್‌ಸ್ಟೆಬಲ್ ರಮೇಶ ಭಜಂತ್ರಿಯನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಲಾಗಿದೆ. ವಿಚಾರಣೆ ಬಳಿಕ ಅಗತ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net