ಶಿವಶರಣ ಹಡಪದ ಅಪ್ಪಣ ಜಯಂತಿ 22ರಂದು

Published on

ಹಾವೇರಿ: ಜಿಲ್ಲಾಡಳಿತದಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಜು.22ರಂದು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿವಶರಣರ ವಿಚಾರಗಳನ್ನು ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶರಣರ ಜಯಂತಿಗಳನ್ನು ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಶಿಗ್ಗಾಂವಿ ಪಟ್ಟಣದಲ್ಲಿ ಆಚರಿಸಲು ಸಮಾಜ ಬಾಂಧವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ಜಿಲ್ಲಾಡಳಿತದಿಂದ ಜು.22ರಂದು ಸಾಂಕೇತಿವಾಗಿ ಆಚರಿಸಲಾಗುವುದು. ಸಮಾಜ ಬಾಂಧವರು ಸ್ಥಳೀಯ ಶಾಸಕರ ಅನುಮತಿ ಪಡೆದುಕೊಂಡು ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಶಿಗ್ಗಾಂವಿಯಲ್ಲಿ ಆಚರಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ವಿವಿಧ ಇಲಾಖೆಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net