ಹಾವೇರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಇಂದಿರಾಗಾಂಧಿ ವಸತಿ ಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ ಎಸ್‌ಎಟಿಎಸ್ ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಅಗತ್ಯ ಮೂಲ ದಾಖೆಗಳೊಂಗೆ ಹತ್ತಿರದ ವಸತಿ ಶಾಲೆಗೆ ತೆರಳಿ ಜ.25ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗದ ಪ್ರವರ್ಗದ-1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮತ್ತು ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದವರ ವಾರ್ಷಿಕ ಆದಾಯ 1 ಲಕ್ಷದೊಳಗಿರಬೇಕು.
ಫೆ.15ರಂದು ಮಧ್ಯಾಹ್ನ 2.30ರಿಂದ 4.30ರವರೆಗೆ ಪ್ರವೇಶ ಪರೀಕ್ಷೆ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ಸಹಾಯವಾಣಿ ಸಂಖ್ಯೆ 080-23460460 ಅಥವಾ ಸಮೀಪದ ವಸತಿ ಶಾಲಾ-ಕಾಲೇಜ್‌ನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.