ಅಶಿಸ್ತು ತೋರಿದ 17 ಪೊಲೀಸ್ ಸಿಬ್ಬಂದಿ ಅಮಾನತು ; ನೂತನ ಎಸ್‌ಪಿ ಅಂಶುಕುಮಾರ ಕಟ್ಟುನಿಟ್ಟಿನ ಕ್ರಮ

Police logo
Published on

ಹಾವೇರಿ: ಕರ್ತವ್ಯದಲ್ಲಿ ಅಶಿಸ್ತು ತೋರಿಸಿದ ಹಿನ್ನೆಲೆಯಲ್ಲಿ 17 ಪೊಲೀಸ್ ಕಾನ್‌ಸ್ಟೆಬಲ್ ಹಾಗೂ ಹೆಡ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ನೂತನ ಎಸ್‌ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಜಿಲ್ಲೆಯ ಸಮಸ್ಯೆಗಳ ಕುರಿತು ವಿವಿಧ ಆಯಾಮಗಳಲ್ಲಿ ಅಧ್ಯಯನ ನಡೆಸುತ್ತಿರುವ ಎಸ್‌ಪಿ ಅವರಿಗೆ ಇಲಾಖೆಯ ಕೆಲ ಸಿಬ್ಬಂದಿಯ ಕರ್ತವ್ಯದಲ್ಲಿನ ಲೋಪದ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ಕೂಲಂಕಶವಾಗಿ ಪರಿಶೀಲನೆ ನಡೆಸಿದ ಎಸ್‌ಪಿಯವರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ 17 ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಮೂಲಕ ಕರ್ತವ್ಯ ಮರೆತು, ತನ್ನಿಚ್ಛೆಯಂತೆ ನಡೆದುಕೊಳ್ಳುವ ಕೆಲ ಅಧಿಕಾರಿ, ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net