ಕಾನ್‌ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆ 10ರಂದು; ಪಾರದರ್ಶಕತೆಗೆ ಒತ್ತು, ಯಾರಿಗೂ ಹಣ ನೀಡದಿರಿ; ಎಸ್‌ಪಿ ಅಂಶುಕುಮಾರ ಮನವಿ

SP Anshukumar
Published on

ಹಾವೇರಿ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಕಲ್ಯಾಣ ಕರ್ನಾಟಕ ಪ್ರದೇಶದ) 454 ಹುದ್ದೆಗಳ ನೇಮಕಾತಿಗೆ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಡಿ.10ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ಜರುಗಲಿದೆ. 5,100 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದ್ದಾರೆ.
ಲಿಖಿತ ಪರೀಕ್ಷೆಯು ಪಾರದರ್ಶಕತೆ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠೆ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಅಭ್ಯರ್ಥಿಗಳು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.
ಲಿಖಿತ ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ವೆಬ್‌ಸೈಟ್ ಡಿಡಿಡಿ.್ಟಛ್ಚ್ಟ್ಠಿಜಿಠಿಞಛ್ಞಿಠಿ..ಜಟ.ಜ್ಞಿ ನಿಂದ ಡೌನ್‌ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನೀಡಿರುವ ಸೂಚನೆಗಳಂತೆ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷೆಗೆ ಬರುವಾಗ ಮೊಬೈಲ್, ಯಾವುದೇ ಎಲೆಕ್ಟ್ರಾನಿಕ್ ವಸ್ತು, ಸ್ಮಾರ್ಟ ವಾಚ್‌ಗಳನ್ನು ತರಬಾರದು ಎಂದು ಪ್ರಕಟಣೆ ಮೂಲಕ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
14 ಪರೀಕ್ಷಾ ಕೇಂದ್ರಗಳು
ಹಾವೇರಿ ನಗರದ ಹೊಸಮಠ ಬಸವೇಶ್ವರ ಕಾಲೇಜ್, ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜ್, ದೇವಗಿರಿ ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್, ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಹಾವೇರಿ ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ, ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆ, ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮುನ್ಸಿಪಲ್ ಹೈಸ್ಕೂಲ್, ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ, ಎಸ್.ಜೆ.ಎಂ. ಪಿಯು ಕಾಲೇಜ್, ಎಸ್.ಎಂ.ಎಸ್. ಬಾಲಕಿಯರ ಪ್ರೌಢಶಾಲೆ, ಸೇಂಟ್ ಆನ್ಸ್ ಪ್ರಾಥಮಿಕ ಶಾಲೆ ಹಾಗೂ ಇಜಾರಿಲಕಮಾಪೂರ ಬಿ.ಪಿ.ಇಡಿ ಮಹಾವಿದ್ಯಾಲಯದಲ್ಲಿ ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net