ಡಿಜೆ ಬ್ಯಾನ್, ಉಲ್ಲಂಘಿಸಿದರೆ ಶಿಸ್ತು ಕ್ರಮ; ತಪ್ಪು ಸಂದೇಶ ಹರಿಬಿಟ್ಟರೆ ಹುಷಾರ್, ಎಸ್‌ಪಿ ಎಚ್ಚರಿಕೆ

Published on

ಹಾವೇರಿ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಮೆರವಣಿಗೆ ಸಂದರ್ಭದಲ್ಲಿ ಸವೋಚ್ಛ/ ಉಚ್ಛ ನ್ಯಾಯಾಲಯಗಳ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಡಿಜೆ ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ಆದೇಶ ಉಲ್ಲಂಘನೆ ಆಗದಂತೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಧ್ವನಿವರ್ದಕಗಳ ಬಳಕೆಗೆ ಅನುಮತಿ ಪಡೆದು ಉಪಯೋಗಿಸಬೇಕು.

ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಡಿಜೆ ಬಳಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಬಿಟ್ಟರೆ, ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net