ಹಂತ ಹಂತವಾಗಿ ಕಾನೂನು ಕ್ರಮಗಳನ್ನು ಜಾರಿಗೊಳಿಸಿ

25 HVR 6
Published on

ಹಾವೇರಿ: ಕೃಷಿ ಪ್ರಧಾನವಾಗಿರುವ ಹಾವೇರಿ ಜಿಲ್ಲೆಯಲ್ಲಿ ರೈತರು ದಿನನಿತ್ಯ ನಗರಗಳಿಗೆ ಬಂದು ಹೋಗುತ್ತಾರೆ. ಪ್ರಸ್ತುತ ಬರ ಆವರಿಸಿದ್ದರಿಂದ ಅನ್ನದಾತ ಸಂಕಷ್ಟದಲ್ಲಿದ್ದಾನೆ. ಇಂತಹ ಸಂದರ್ಭದಲ್ಲಿ ಏಕಾಏಕಿ ಕಟ್ಟುನಿಟ್ಟಿನ ಸಂಚಾರ ಹಾಗೂ ಕಾನೂನು ಕ್ರಮಗಳನ್ನು ಜಾರಿಗೊಳಿಸಬಾರದು. ಹಂತ ಹಂತವಾಗಿ ಜಾಗೃತಿ ಮೂಡಿಸಿದ ಬಳಿಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪೊಲೀಸ್ ರಕ್ಷಣಾ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರಿಗೆ ಹಾವೇರಿಯಲ್ಲಿ ಇತ್ತೀಚೆಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ, ಅಣ್ಣಪ್ಪ ಅಜ್ಜಪ್ಪನವರ, ಕರಬಸಪ್ಪ ಪರಸಣ್ಣನವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net