ಹಾವೇರಿ: ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಇತ್ತೀಚೆಗೆ ವನಮಹೋತ್ಸವ ಆಚರಿಸಲಾಯಿತು. ಸಿಪಿಐ ಮೋತಿಲಾಲ ಪವಾರ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಕ್ಲಬ್ ಅಧ್ಯಕ್ಷೆ ಪ್ರತಿಭಾ ಹಾವನೂರ, ಕಾರ್ಯದರ್ಶಿ ತೇಜಶ್ರೀ ಸುರಳಿಹಳ್ಳಿ, ಖಜಾಂಚಿ ಶಿಲ್ಪಾ ಚುರ್ಚಿಹಾಳ, ಸುಧಾ ಆನೂರಶೆಟ್ರ, ಇತರ ಪದಾಧಿಕಾರಿಗಳು ಇದ್ದರು.