ಆರೋಗ್ಯ ಕಾಪಾಡಿಕೊಂಡು ಶಿಸ್ತಿನಿಂದ ಸೇವೆ ಮಾಡಿ; ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪೊಲೀಸರಿಗೆ ನಿವೃತ್ತ ಪಿಎಸ್‌ಐ ಮಣ್ಣಣ್ಣನವರ ಕಿವಿಮಾತು

2 HVR 5 A
Published on

ಹಾವೇರಿ: ಸಮಾಜದ ಶಾಂತಿ ಹಾಗೂ ನೆಮ್ಮದಿಗಾಗಿ ದಿನದ 24 ತಾಸು ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯವಾದದ್ದು. ವಿಶ್ರಾಂತಿ ರಹಿತವಾಗಿ ಸಮಾಜಕ್ಕಾಗಿ ದುಡಿಯುವ ಪೊಲೀಸರು ತಮ್ಮ ಆರೋಗ್ಯ ಕಾಪಾಡಿಕೊಂಡು ಶಿಸ್ತಿನಿಂದ ಕೆಲಸ ಮಾಡಬೇಕು ಎಂದು ನಿವೃತ್ತ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಂ.ಇ.ಮಣ್ಣಣ್ಣನವರ ಅಧಿಕಾರಿ, ಸಿಬ್ಬಂದಿಗೆ ಕಿವಿಮಾತು ಹೇಳಿದರು.
ಇಲ್ಲಿನ ಕೆರಿಮತ್ತಿಹಳ್ಳಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ವರದಿ ವಾಚನ ಮಾಡಿ ಮಾತನಾಡಿದರು. ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯನ್ನು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ದಿನವನ್ನು ಪ್ರತಿ ವರ್ಷ ಏ.2ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಲಾಗುತ್ತದೆ. ಪೊಲೀಸರ ಕಲ್ಯಾಣ ನಿಧಿಗಾಗಿ ಮಾರಾಟ ಮಾಡಿದ ಧ್ವಜದಿಂದ ಸಂಗ್ರಹವಾದ ಹಣವನ್ನು ಕರ್ತವ್ಯ ನಿರತ ಹಾಗೂ ನಿವೃತ್ತ ಪೊಲೀಸರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲಾಗುತ್ತದೆ ಎಂದು ಹೇಳಿದರು.
2023-24ರಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಜಿಲ್ಲೆಯ ವಿವಿಧ ವಿಭಾಗಗಳ ಡಿವೈಎಸ್‌ಪಿಗಳು, ವಿವಿಧ ಠಾಣೆಗಳ ಪಿಐ, ಪಿಎಸ್‌ಐ, ಸಿಬ್ಬಂದಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net