ಯಾಸೀರ್ ಅಹ್ಮದ್ ಪಠಾಣ ಮೇಲೆ ರೌಡಿಶೀಟ್ ಇರುವುದಿಲ್ಲ; ಎಸ್ಪಿ ಸ್ಪಷ್ಟನೆ

Published on

ಹಾವೇರಿ: ಯಾಸೀರ್ ಅಹ್ಮದ್ ತಂದೆ ಮೊಹ್ಮದ್‌ಖಾನ್ ಪಠಾಣ ಇವರ ಮೇಲೆ ಯಾವುದೇ ರೀತಿಯ ರೌಡಿಶೀಟ್ ಇರುವುದಿಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಯಾಸೀರ್ ಅಹ್ಮದ್ ತಂದೆ ಮೊಹ್ಮದ್‌ಖಾನ್ ಪಠಾಣ ಇವರ ಮೇಲೆ ರೌಡಿಶೀಟ್ ಇದೆ ಅಂತ ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಶಿಗ್ಗಾಂವಿಯ ಡಿಎಸ್‌ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಅಹ್ಮದ್ ಖಾನ್ ಪಠಾಣ ಮೇಲೆ ಯಾವುದೇ ರೌಡಿಶೀಟ್ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net