ಹಾವೇರಿ: ಜಿಲ್ಲೆಯಲ್ಲಿ ಖಾಲಿ ಇರುವ 59 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಸೆ.11ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಜಿಲ್ಲಾ ಎಸ್‌ಪಿ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ವೆಬ್‌ಸೈಟ್ https://haveripolice.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.