ಹಾವೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಇಲಾಖೆಯ ತರಬೇತುದಾರರಿಂದ ಎರಡು ಹಂತದಲ್ಲಿ ಉಚಿತವಾಗಿ ಅಥ್ಲೆಟಿಕ್ಸ್ ಮತ್ತು ಹಾಕಿ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಮೊದಲ ಹಂತದಲ್ಲಿ ಏ.10ರಿಂದ 26ರವರೆಗೆ ಹಾಗೂ ಎರಡನೇ ಹಂತದಲ್ಲಿ ಮೇ 2ರಿಂದ 18ರವರೆಗೆ ಬೆಳಗ್ಗೆ 6ರಿಂದ 8 ಗಂಟೆವರೆಗೆ ಅಥ್ಲೆಟಿಕ್ಸ್ ಮತ್ತು ಹಾಕಿ ತರಬೇತಿ ನೀಡಲಾಗುವುದು. ಆಸಕ್ತರು ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಇಲಾಖೆ ಕಚೇರಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ತಿಳಿಸಿದ್ದಾರೆ.