ಜಿಎಚ್ ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

9 HVR 6
Published on

ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯದ 42 ಕ್ರೀಡಾಪಟುಗಳು ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಜಯಶಾಲಿಗಳಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಸ್ಕೆಟ್‌ಬಾಲ್, ಹ್ಯಾಂಡ್‌ಬಾಲ್, ಟೇಬಲ್‌ಟೆನಿಸ್, ಗುಡ್ಡಗಾಡು ಓಟ, ಫುಟ್ಬಾಲ್, ಚೆಸ್, ಕರಾಟೆ ಸೇರಿದಂತೆ ಅಥ್ಲೆಟಿಕ್ಸ್ ಆಟಗಳಲ್ಲಿ ಭಾಗವಹಿಸಿದ್ದ 42 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ತಂಡಕ್ಕೆ ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ. ಮತ್ತು ದೈಹಿಕ ನಿರ್ದೇಶಕ ಶ್ರೀಕಾಂತ ಗುಡಗುಡಿ ಮಾರ್ಗದರ್ಶನ ಮಾಡಿದ್ದರು.
ಸ್ಪರ್ಧಾಳುಗಳ ಸಾಧನೆಗೆ ಕೆ.ಎಲ್.ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೊಳ್ಳಿ, ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾ.ಎಸ್.ಎಲ್.ಬಾಲೇಹೊಸೂರ, ಸದಸ್ಯರಾದ ಸಿ.ಬಿ.ಹಿರೇಮಠ, ಜೆ.ಎಸ್.ಅರಣಿ, ಎಸ್.ಜೆ.ಹೆರೂರ, ಎಸ್.ಎಂ.ಹುರಳಿಕುಪ್ಪಿ, ಪ್ರಾಚಾರ್ಯರಾದ ಡಾ. ಸಂಧ್ಯಾ ಆರ್. ಕುಲಕರ್ಣಿ, ಡಾ.ಜೆ.ಆರ್.ಶಿಂಧೆ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net