ಕ್ರೀಡಾ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಂದ (6ನೇ ತರಗತಿಯಿಂದ 10ನೇ ತರಗತಿವರೆಗೆ) ಕ್ರೀಡಾ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆಗಳು ದಿನಾಂಕ 1-4-2023ರಿಂದ 31-3-2024ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ರಾಷ್ಟ್ರೀಯ ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಬಹುದಾಗಿದೆ.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ವಾರ್ಷಿಕ 10,000 ರೂ. ಮಂಜೂರು ಮಾಡಲಾಗುವುದು.
ಅರ್ಹ ಕ್ರೀಡಾಪಟುಗಳು ಕಚೇರಿಯ ಅಧಿಕೃತ ಜಾಲತಾಣ ಸೇವಾಸಿಂಧು ಆನ್‌ಲೈನ್ ವೆಬ್‌ಸೈಟ್ https://sevasindhuservices.karnataka.gov.in ನ ಮೂಲಕ ಜೂ.30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾವೇರಿ ಇವರನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net