ಹಾವೇರಿ: ಕ್ರೀಡಾ ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಮಾಧ್ಯಮಿಕ ಅಥವಾ ಪ್ರೌಢಶಾಲೆ (6ರಿಂದ 10ನೇ ತರಗತಿ) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು 2022-23ನೇ ಸಾಲಿನಲ್ಲಿ ಮಾಧ್ಯಮಿಕ ಅಥವಾ ಪ್ರೌಢಶಾಲೆ (6ರಿಂದ 10ನೇ ತರಗತಿ)ಯಲ್ಲಿ ಓದಿರಬೇಕು. ದಿನಾಂಕ 2022 ಏಪ್ರಿಲ್ 1ರಿಂದ 2023 ಮಾರ್ಚ್ 31ರ ಅವಧಿಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಹಾಗೂ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿದ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಭಾಗವಹಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಕ್ರೀಡಾಪಟುಗಳಿಗೆ ವಾರ್ಷಿಕ 10 ಸಾವಿರ ರೂ. ಮಾತ್ರ ಮಂಜೂರು ಮಾಡಲಾಗುವುದು.
ಅರ್ಹ ಕ್ರೀಡಾಪಟುಗಳು ಆನ್‌ಲೈನ್ ಠಿಠಿ://ಛಿಜ್ಞಿಜ್ಠಛ್ಟಿಜ್ಚಿಛಿ.ಚ್ಟ್ಞಠಿ.ಜಟ.ಜ್ಞಿ ಮೂಲಕ ಜುಲೈ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಟಣೆಯಲ್ಲಿ ತಿಳಿಸಿದೆ.