ದಾನಮ್ಮದೇವಿ ಜಾತ್ರಾ ಮಹೋತ್ಸವ ನ.30 ಹಾಗೂ ಡಿ.1ರಂದು

Danamma devi
Published on

ಹಾವೇರಿ: ನಗರದ ಶ್ರೀ ದಾನಮ್ಮದೇವಿ ಜಾತ್ರಾ ಮಹೋತ್ಸವ ನ.30 ಹಾಗೂ ಡಿ.1ರಂದು ವೈಭವದಿಂದ ಜರುಗಲಿವೆ.

ನ.30ರಂದು ಬೆಳಗ್ಗೆ 9.30ಕ್ಕೆ ದೇವಸ್ಥಾನದ ಆವರಣದಲ್ಲಿ ಷಟಸ್ಥಲ ದ್ವಜಾರೋಹಣವನ್ನು ಗುರುಪಾದೇವರಮಠದ ಶಿವಯೋಗಿ ಶಿವಾಚಾರ್ಯರು ನೆರವೇರಿಸುವರು. ಸಂಜೆ 6.30ಕ್ಕೆ ಧಾರವಾಡ ಮುರುಘಾ ಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಭಾಗವಹಿಸಲಿದ್ದು, ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಶೋಭಾತಾಯಿ ಮಾಗಾವಿ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ತರರು ಭಾಗವಹಿಸುವರು. ಪ್ರಾಚಾರ್ಯ ರೇವಣಸಿದ್ದಪ್ಪ ಹೆಗಡಾಲ ಉಪನ್ಯಾಸ ನೀಡುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ಸಾಧಕರಿಗೆ ಸನ್ಮಾನಿಸಲಾಗುವುದು.

ಡಿ.1ರಂದು ಬೆಳಗ್ಗೆ 10 ಗಂಟೆಗೆ ದೇವಿಯ ಪಾಲಕಿ ಉತ್ಸವ ನಡೆಯಲಿದೆ. ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಬಣ್ಣದಮಠ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಂತರ ಪ್ರಸಾದ ವಿತರಿಸಲಾಗುವುದು ಎಂದು ದಾನಮ್ಮದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಶೋಭಾತಾಯಿ ಮಾಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net