

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ, ತಾಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ ಅ.28ರಂದು ನಗರದ ಜಿಲ್ಲಾ ಗುರುಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಜರುಗಲಿದೆ. ಇದಕ್ಕೂ ಮೊದಲು ಬೆಳಗ್ಗೆ 9.30ಕ್ಕೆ ಪುರಸಿದ್ವೇಶ್ವರ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಹೊರಡಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ಜಿಲ್ಲೆಯ ಶಾಸಕರು, ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಉಚ್ಛ ನ್ಯಾಯಾಲಯದ ವಕೀಲ ಅನಂತ ನಾಯಕ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.