

ಹಾವೇರಿ: ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ಪಂಗಡಗಳ ಇಲಾಖೆಯ ಸಹಯೋಗದಲ್ಲಿ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ನೆರೆವೇರಿಸಿದರು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಡಿಡಿಪಿಐ ಸುರೇಶ ಹುಗ್ಗಿ, ವಾಲ್ಮೀಕಿ ಮಹಾಸಭಾದ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಇತರರು ಪಾಲ್ಗೊಂಡಿದ್ದರು.