

ಹಾವೇರಿ: ಮಾಜಿ ಸಚವ ಬಿ.ಸಿ.ಪಾಟೀಲ ಅವರ ಪುತ್ರಿ ಸೃಷ್ಟಿ ಪಾಟೀಲ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಒಂದು ವರ್ಷದ ಹಿಂದೆ ನನ್ನನ್ನು ಮಹಿಳಾ ಮೋರ್ಚಾದ ಅಧ್ಯಕ್ಷರನ್ನಾಗಿ ಮಾಡಿದ್ದು ಸಂತೋಷದ ವಿಷಯ. ಅಂದಿನಿಂದ ಇಂದಿನವರೆಗೆ ಒಬ್ಬ ಗೃಹಿಣಿಯಾಗಿ ಸಾಧ್ಯವಾದಷ್ಟು ಕೆಲಸ ಮಾಡಿದ್ದೇನೆ. ಆದರೆ, ನಿರೀಕ್ಷಿತ ಮಟ್ಟದ ಕೆಲಸ ನನ್ನಿಂದ ಆಗಿಲ್ಲ ಎಂಬ ಭಾವನೆ ಕಾಡುತ್ತಿದೆ. ಹಾಗಾಗಿ, ಈ ಸ್ಥಾನಕ್ಕೆ ಅನ್ಯಾಯ ಆಗಬಾರದು ಎಂಬ ಕಾರಣಕ್ಕೆ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತೇನೆ ಎಂದು ಸೃಷ್ಟಿ ಪಾಟೀಲ ಬಿಜೆಪಿ ಜಿಲ್ಲಾಧ್ಯಕ್ಷ, ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.
ರಾಜ್ಯ ಹಾಗೂ ಜಿಲ್ಲಾ ಬಿಜೆಪಿ ಪಕ್ಷದಲ್ಲಿ ಹಲವು ವಿದ್ಯಮಾನಗಳು ನಡೆದಿರುವ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಬಿ.ಸಿ.ಪಾಟೀಲರ ಪುತ್ರಿ ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ.