ಎಸ್ಸೆಸ್ಸೆಲ್ಸಿ ಎರಡನೇ ದಿನದ ಪರೀಕ್ಷೆ ಸುಗಮ

SSLC Exams
Published on

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಎರಡನೇ ದಿನ ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ಜಿಲ್ಲೆಯಲ್ಲಿ ಸುಗಮವಾಗಿ ಜರುಗಿತು. ಜಿಲ್ಲೆಯ 77 ಪರೀಕ್ಷಾ ಕೇಂದ್ರಗಳಲ್ಲಿ 22,354 ವಿದ್ಯಾರ್ಥಿಗಳು ಹಾಜರಾಗಿದ್ದರು. 237 ವಿದ್ಯಾರ್ಥಿಗಳು ಗೈರಾಗಿದ್ದರು.
ಜಿಲ್ಲೆಯ ಎಲ್ಲ 77 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅವವಡಿಸಲಾಗಿತ್ತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ ಜಿಲ್ಲೆಯ 22,591 ವಿದ್ಯಾರ್ಥಿಗಳ ಪೈಕಿ 237 ವಿದ್ಯಾರ್ಥಿಗಳು ಗೈರಾಗಿದ್ದರು. ನಕಲು ನಡೆದಿರುವ ಪ್ರಕರಣಗಳು ವರದಿಯಾಗಿಲ್ಲ.
ಬ್ಯಾಡಗಿ ತಾಲೂಕಿನಲ್ಲಿ 26, ಹಾಗನಲ್ಲನಲ್ಲಿ 32, ಹಾವೇರಿ 26, ಹಿರೇಕೆರೂರ 38, ರಾಣೆಬೆನ್ನೂರ 57, ಸವಣೂರ 34 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಪಾರದರ್ಶಕವಾಗಿ ಪರೀಕ್ಷೆ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಇಲ್ಲಿಯೇ ಕುಳಿತು ಎಲ್ಲ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗುವ ದೃಶ್ಯಗಳನ್ನು ನಿಯೋಜಿತ ಸಿಬ್ಬಂದಿ ಮತ್ತು ಅಧಿಕಾರಿಗಳು ವೀಕ್ಷಿಸಿದರು. ಆಯಾ ಶಾಲೆಗಳ ಸಿಬ್ಬಂದಿಗೆ ಅಗತ್ಯ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net