ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಸುಸೂತ್ರ

SSLC Exams
Published on

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೂರನೇ ದಿನವಾದ ಶನಿವಾರ ನಡೆದ ವಿಜ್ಞಾನ ವಿಷಯದ ಪರೀಕ್ಷೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ 77 ಪರೀಕ್ಷಾ ಕೇಂದ್ರಗಳಲ್ಲಿ 22,557 ವಿದ್ಯಾರ್ಥಿಗಳು ಹಾಜರಾಗಿದ್ದು, 284 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಎಲ್ಲ 77 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅವವಡಿಸಲಾಗಿದ್ದು, ಜಿಪಂ ಕಚೇರಿಯಿಂದ ಮಾನಿಟರಿಂಗ್ ಮಾಡಲಾಗುತ್ತಿದೆ. ಇಲ್ಲಿಂದಲೇ ಎಲ್ಲ ಕೇಂದ್ರಗಳ ಮೇಲೆ ಕಣ್ಣಿಡಲಾಗಿದೆ. ಜಿಲ್ಲೆಯಲ್ಲಿ ನಕಲು ನಡೆದಿರುವ ಪ್ರಕರಣಗಳು ವರದಿಯಾಗಿಲ್ಲ.
ಬ್ಯಾಡಗಿ ತಾಲ್ಲೂಕಿನಲ್ಲಿ 28, ಹಾಗನಲ್46, ಹಾವೇರಿ 30, ಹಿರೇಕೆರೂರು 48, ರಾಣೆಬೆನ್ನೂರು 60, ಸವಣೂರು 45 ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು ಎಂದು ಡಿಡಿಪಿಐ ಸುರೇಶ ಹುಗ್ಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net