ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 21,579 ಅಭ್ಯರ್ಥಿಗಳು

SSLC 1
Published on

ಹಾವೇರಿ: ಶಿಕ್ಷಣ ಇಲಾಖೆಯಿಂದ ಶುಕ್ರವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಯಿತು. 21,579 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 95 ಅಭ್ಯರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ 96 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಕನ್ನಡ ಪ್ರಥಮ ಭಾಷೆಯ ಪರೀಕ್ಷೆ ಸುಗಮವಾಗಿ ಜರುಗಿತು. 18 ವರ್ಷ ಮೇಲ್ಪಟ್ಟ 485 ಅಭ್ಯರ್ಥಿಗಳು ಪರೀಕ್ಷೆ ಬರೆದರು. 89 ಅಭ್ಯರ್ಥಿಗಳು ಗೈರಾಗಿದ್ದರು. ಪರೀಕ್ಷೆ ವೇಳೆ ಯಾವುದೇ ತೊಂದರೆ ಉಂಟಾಗಿಲ್ಲ. ಯಾರೊಬ್ಬರೂ ಡಿಬಾರ್ ಆಗಿಲ್ಲ ಎಂದು ಡಿಡಿಪಿಐ ಜಗದೀಶ್ವರ ‘ವಿಜಯವಾಣಿ’ಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net