

ಹಾವೇರಿ: ಜಿಲ್ಲೆಯ 80 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್.ಎಸ್.ಎಲ್.ಸಿ. ಪರೀಕ್ಷೆಯ ದ್ವಿತೀಯ ಭಾಷೆ ಇಂಗ್ಲಿಷ್ ಪರೀಕ್ಷೆ ಸುಗಮವಾಗಿ ಜರುಗಿದೆ.
ದ್ವಿತೀಯ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊಂಡ 22,076 ವಿದ್ಯಾರ್ಥಿಗಳ ಪೈಕಿ 21,773 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. 303 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಡಿಸಿ ಭೇಟಿ
ಶಿಗ್ಗಾಂವಿ ನಗರದ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನೀಡಿದರು. ಶಿಗ್ಗಾಂವಿಯ ಮಾಮ್ಲೆದೇಸಾಯಿ ಸಂಯುಕ್ತ ಮಹಾವಿದ್ಯಾಯದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಭಯ ಪಡದಂತೆ ಧೈರ್ಯವಾಗಿ ಪರೀಕ್ಷೆ ಬರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.