ನ್ಯಾಯಾಂಗ ಆಡಳಿತ ತರಬೇತಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published on

ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಹಾವೇರಿ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ಎರಡು ವರ್ಷಗಳ ತರಬೇತಿಗೆ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ಅಂತಿಮ ಕಾನೂನು ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ವಕೀಲ ವೃತ್ತಿ ನಡೆಸಲು ಅರ್ಹತೆಗಳನ್ನು ಪಡೆದಿರುವ ಕಾನೂನು ಪದವೀಧರರು, 40 ವರ್ಷದೊಳಗಿನವರು, 2 ಲಕ್ಷ ರೂ. ಒಳಗೆ ವಾರ್ಷಿಕ ಆದಾಯ ಇರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದವರಿಗೆ ಎರಡು ವರ್ಷಗಳ ಅವಧಿಗೆ ಡಿಸ್ಟಿಕ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಆಯಾ ತಾಲೂಕು ಕಾನೂನು ಸೇವಾ ಸಮಿತಿಗೆ ತರಬೇತಿಗೆ ನಿಯೋಜಿಸಿ ಪ್ರತಿ ತಿಂಗಳು 10,000 ರೂ. ಶಿಷ್ಯವೇತನ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಜುಲೈ 31ರೊಳಗಾಗಿ ಡಿಡಿಡಿ.ಡಿ.ಚ್ಟ.್ಞಜ್ಚಿ.ಜ್ಞಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಅಥವಾ ಉಪ ನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಹಾವೇರಿ ಇಲ್ಲಿಗೆ ಭೇಟಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net