5ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ

17 HVR 4
Published on

ಹಾವೇರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮತದಾರರ ಸಾಕ್ಷರತಾ ಸಂಘ, ಜಿಲ್ಲಾ ಪಂಚಾಯಿತಿ ಹಾವೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಯತ್ತಿನಹಳ್ಳಿ ಗ್ರಾಮದ ಸಾಯಿಚಂದ್ರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ವಾತಿ ಹಬೀಬ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

2020ರಿಂದ ನಿರಂತರವಾಗಿ ಐದು ವರ್ಷಗಳಿಂದ ಈ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ. ಶಿಕ್ಷಕ ಗೋವಿಂದರಾಜ ಕಡಕೋಳ ಮಾಗದರ್ಶನದಲ್ಲಿ ಸ್ವಾತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net